*ಗೋಣಿಕೊಪ್ಪಲು, ಜೂ. 4: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಪೆÇನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಯ ನೂತನ ಅಧ್ಯಕ್ಷರಾಗಿ ಕೊಣಿಯಂಡ ಮುತ್ತಣ್ಣ ಅವರನ್ನು ನೇಮಿಸಲಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹನೀಫ್ ಹಾಗೂ ವೀರಾಜಪೇಟೆ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಅವರ ಉಪಸ್ಥಿತಿಯಲ್ಲಿ ಕೊಣಿಯಂಡ ಮುತ್ತಣ್ಣ ಅವರನ್ನು ಆಯ್ಕೆ ಮಾಡಲಾಗಿದೆ.