ಮಡಿಕೇರಿ, ಜೂ. 6 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ತಾ. 10ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಅಂದು ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಕೊರೊನಾ ನಿಯಂತ್ರಣದ ಕ್ರಮದ ಬಗ್ಗೆ ಪರಿಶೀಲನೆ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 1.30 ಗಂಟೆಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.