ಮಡಿಕೇರಿ, ಜೂ.5: ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತೀ ವರ್ಷ ಜೂನ್ 1 ರಿಂದ ಜುಲೈ, 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತೀ ಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಫೀಳಿಗೆಗೆ ತಮ್ಮ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಹಾಗೂ ಮೀನುಗಾರರು ಮೀನುಗಳನ್ನು ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ಧಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣೆಯಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಕೋರಿದ್ದಾರೆ.