ಮಡಿಕೇರಿ, ಜೂ. 5: ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಮಡಿಕೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ ಅವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು.

ಮಡಿಕೇರಿ ಬ್ಲಾಕ್ ಯುವ ಅಧ್ಯಕ್ಷರಾಗಿ ರಿಜ್ವಾನ್ ರಝಾಕ್, ಪೆÇನ್ನಂಪೇಟೆ ಬ್ಲಾಕ್ ಯುವ ಅಧ್ಯಕ್ಷರಾಗಿ ಕೊಣಿಯಂಡ ಮುತ್ತಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ಆಬಿದ್ ಅತ್ತೂರ್, ನಾಪೆÇೀಕ್ಲು ಬ್ಲಾಕ್ ಯುವ ಅಧ್ಯಕ್ಷರಾಗಿ ಸುದೈ ನಾಣಯ್ಯ, ವೀರಾಜಪೇಟೆ ಬ್ಲಾಕ್ ಅಧ್ಯಕ್ಷರಾಗಿ ಉಮರ್ ಫಾರೂಕ್ ಗುಂಡಿಗೆರೆ, ಉಪಾಧ್ಯಕ್ಷರಾಗಿ ಸಮೀರ್ ಹುಂಡಿ, ಕುಶಾಲನಗರ ಬ್ಲಾಕ್ ಅಧ್ಯಕ್ಷರಾಗಿ ದೇವಪ್ಪ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆಯಾಗಿದ್ದಾರೆ.

ವೀರಾಜಪೇಟೆ ವಿಧಾಸಭಾ ಕ್ಷೇತ್ರ ಯುವ ಅಧ್ಯಕ್ಷ ಜಮ್ಮಡ ಸೋಮಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರ ಯುವ ಅಧ್ಯಕ್ಷ ಮಿಥುನ್ ಹಾನಗಲ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಾಫಿ ಕೊಟ್ಟಮುಡಿ, ಜಿಲ್ಲಾ ಉಪಾಧ್ಯಕ್ಷ ಶರ್ಫು ಗೋಣಿಕೊಪ್ಪ ಇವರ ಸಮ್ಮುಖದಲ್ಲಿ ನೇಮಕಾತಿ ಆದೇಶ ನೀಡಲಾಯಿತು.

ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ನಾಪೆÇೀಕ್ಲು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಟಿ. ಎಂ. ಶಾಹೀದ್, ಅಲ್ಪಸಂಖ್ಯಾತ ಜಿಲ್ಲಾ ಅಧ್ಯಕ್ಷ ಉಸ್ಮಾನ್ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರ ಯುವ ಉಪಾಧ್ಯಕ್ಷ ಮೈಸಿ ಕತ್ತಳಿರ, ವೀರಾಜಪೇಟೆ ಪಟ್ಟಣ ಪಂಚಾಯತಿ ಸದಸ್ಯ ಮೊಹಮ್ಮದ್ ರಾಫಿ, ವೀರಾಜಪೇಟ್ ನಗರ ಅಧ್ಯಕ್ಷ ರಕ್ಷಿತ್ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರುಗಳು ಹಾಜರಿದ್ದರು.