ಮಡಿಕೇರಿ, ಜೂ. 5: ಪ್ರಸಕ್ತ (2020-21) ಸಾಲಿನಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ(ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ, ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಒಬಿಸಿ, ಎಸ್.ಸಿ, ಎಸ್.ಟಿ, ಅಲ್ಪಸಂಖ್ಯಾತರು, ಸಾಮಾನ್ಯ ವರ್ಗದವರಿಗೆ, ಸ್ವ ಉದ್ಯೋಗ ಮಾಡಿಕೊಳ್ಳುವವರಿಗೆ ಬ್ಯಾಂಕಿನಿಂದ ಗರಿಷ್ಠ 25 ಲಕ್ಷ ರೂ. ವರೆಗೆ ಸಾಲವನ್ನು ನೀಡಿ ಗರಿಷ್ಠ ಶೇ.25 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು. ಈ ಸೌಲಭ್ಯವನ್ನು ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು (ತಿತಿತಿ.ಞviಛಿoಟಿಟiಟಿe.gov.iಟಿ(ಠಿmegಠಿ oಟಿಟiಟಿe ಚಿಠಿಠಿಟiಛಿಚಿಣioಟಿ)ನಲ್ಲಿ (ಏಜೆನ್ಸಿ ಕೋಡ್ ಕೆವಿಐಬಿ) ಎಂದು ಅರ್ಜಿಗಳನ್ನು ಅಳವಡಿಸಿ ಅದರ ಪ್ರತಿಯನ್ನು 2 ಸೆಟ್‍ನಲ್ಲಿ ದಾಖಾಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು. ಅಪೂರ್ಣವಾಗಿ ಭರ್ತಿ ಮಾಡಿದ ಅರ್ಜಿ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಎಂ.ಶಾಂತಿ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ ಇವರ ಕಚೇರಿ ದೂ.ಸಂ.08272- 225946 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಅವರು ತಿಳಿಸಿದ್ದಾರೆ.