ಕೂಡಿಗೆ, ಜೂ. 7: ಕೂಡು ಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರಂಗಿಯ ಸರಕಾರಿ ಆಸ್ಪತ್ರೆಗೆ ಉಸ್ತುವಾರಿ ಸಚಿವ ವಿ. ಸೋಮಣ್ಣ ಮತ್ತು ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಅಭಿವೃದ್ಧಿ ಪಡಿಸಲು ಸೂಚನೆ ನೀಡಿದರು.
ಅದರಂತೆ ಕಾವೇರಿ ನೀರಾವರಿ ನಿಗಮದವರು ಶುಚಿತ್ವದ ಕಡೆಗೆ ಗಮನ ಹರಿಸುವ ಮುಖೇನ ಈಗಿರುವ ಆಸ್ಪತ್ರೆಯ ಆವರಣದಲ್ಲಿ ಬೆಳೆದು ನಿಂತಿದ್ದ ಗಿಡ ಗಂಟಿಗಳನ್ನು ಕಡಿದು, ಸುತ್ತಲಿನ ಪ್ರದೇಶವನ್ನು ಶುಚಿತ್ವಗೊಳಿಸಿದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ಕೂಡುಮಂಗಳೂರು ಗ್ರಾಮ ಪಂಚಾಯತಿ ವತಿಯಿಂದ ಕುಡಿಯುವ ನೀರು ಮತ್ತು ವಿದ್ಯುತ್ ಒದಗಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಶುಚಿತ್ವದ ಜೊತೆಗೆ ಇತರೆ ಕೆಲಸವನ್ನು ನಿರ್ವಹಿಸಲು ಆ ವ್ಯಾಪ್ತಿಯ ಗ್ರಾಮ ಪಂಚಾಯತಿ ಸದಸ್ಯ ಭಾಸ್ಕರ್ ನಾಯಕ್ 14ನೇ ಹಣಕಾಸಿನ ಯೋಜನೆಯಲ್ಲಿ ಕಾಮಗಾರಿ ಕೈಗೊಳ್ಳಲು ಸಿದ್ಧರಾಗಿದ್ದಾರೆ.