ಮಡಿಕೇರಿ, ಜೂ. 7: ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಹಾಯಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಎಸ್.ಐ. ವಸಂತ್ ನಿವೃತ್ತರಾಗಿದ್ದಾರೆ. ಎ.ಎಸ್.ಐ. ವಸಂತ್ ಅವರನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಎಸ್.ಪಿ. ಡಾ. ಸುಮನ್ ಡಿ.ಪಿ., ಡಿವೈಎಸ್‍ಪಿ ದಿನೇಶ್‍ಕುಮಾರ್ ಹಾಗೂ ನಿರೀಕ್ಷಕ ಐ.ಪಿ. ಮೇದಪ್ಪ ಅವರುಗಳು ಸನ್ಮಾನಿಸಿ, ಬೀಳ್ಕೊಟ್ಟರು.