*ಗೋಣಿಕೊಪ್ಪಲು, ಜೂ. 8: ಮಳೆ ಪ್ರವಾಹ ಮತ್ತು ಕೋವಿಡ್-19 ಮುಂಜಾಗೃತ ಕ್ರಮಗಳ ಬಗ್ಗೆ ತಿತಿಮತಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಲಹೆ ಮತ್ತು ಜಾಗೃತಿ ಸಭೆ ನಡೆಸಲಾಯಿತು.
ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗುರುಶಾಂತಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕೋವಿಡ್ -19 ವಿಚಾರವಾಗಿ ಪಂಚಾಯಿತಿ ಜನರ ಹಿತದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳು ಹಾಗೂ ಮುಂಬರುವ ಮಳೆ ಪ್ರವಾಹ ಹಿನ್ನೆಲೆಯಲ್ಲಿ ಎದುರಿಸಬೇಕಾದ ವ್ಯವಸ್ಥೆಗಳ ಬಗ್ಗೆ ತಿಳಿಸಿದರು.
ಗ್ರಾ.ಪಂ. ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷೆ ರಶ್ಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ ಜಗದೀಶ್ ಹಾಗೂ ಸದಸ್ಯರುಗಳು ಹಾಜರಿದ್ದರು.