ಕುಶಾಲನಗರ, ಜೂ. 9: ಕುಶಾಲನಗರದ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪೋಷಕರ ಸಭೆ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ತರಗತಿಗಳನ್ನು ಪುನರಾರಂಭಿಸುವ ಕುರಿತು ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ಶಾಲಾ ಶಿಕ್ಷಕ ವೃಂದದವರು ಪೆÇೀಷಕರೊಂದಿಗೆ ಚರ್ಚಿಸಿ ಅಭಿಪ್ರಾಯ ಪಡೆದು ಕೊಂಡರು.
ಸಭೆಯಲ್ಲಿ ಶಾಲಾ ಆವರಣ ದೊಳಗೆ ಶಿಕ್ಷಕರು ವಿದ್ಯಾರ್ಥಿಗಳ ಬಗ್ಗೆ ನಿಗಾ ವಹಿಸಲು ಸಾಧ್ಯ. ತರಗತಿ ಮುಗಿಸಿ ಹೊರಬರುವ ಪುಟ್ಟ ಮಕ್ಕಳು ಸಾಮಾಜಿಕ ಅಂತರ ಕಾಯ್ದುಕೊಳ್ಳು ವಲ್ಲಿ ವಿಫಲರಾಗುತ್ತಾರೆ. ಅಲ್ಲದೆ ದೀರ್ಘಕಾಲದವರೆಗೆ ಮುಖಕ್ಕೆ ಮುಖಗವಸು ಹಾಕುವುದರಿಂದಾಗಿ ಮಕ್ಕಳಿಗೆ ಆಮ್ಲಜನಕದ ಕೊರತೆ ಉಂಟಾಗಿ ಮುಂದಿನ ಅಪಾಯಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ. ಆ ನಿಟ್ಟಿನಲ್ಲಿ ಸರಕಾರದ ಆದೇಶದನ್ವಯ ಮಕ್ಕಳು ಮನೆಯಲ್ಲಿಯೇ ಇದ್ದು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲಿ ಎಂದು ಪೆÇೀಷಕರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ಟಿ.ಶ್ರೀನಿವಾಸ್, ಶಾಲಾ ಮುಖ್ಯಶಿಕ್ಷಕಿ ಕೆ.ಆರ್.ರಾಣಿ, ಶಿಕ್ಷಕರಾದ ಲತಾ, ಭಾರತಿ, ಎಂ.ಎ. ಭಾರತಿ, ಭವ್ಯ, ನೀಲಮ್ಮ ಸೇರಿದಂತೆ ಶಾಲಾಭಿವೃದ್ಧಿ ಸಮಿತಿಯ ಸರ್ವ ಸದಸ್ಯರು, ಪೆÇೀಷಕರು ಹಾಜರಿದ್ದರು.