ಕಡಂಗ, ಜೂ. 9: ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಅಧ್ಯಕ್ಷ ಹನೀಫ್ ಸಂಪಾಜೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಹಾಗೂ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಾಫಿ ಕೊಟ್ಟಮುಡಿ ಸಮ್ಮುಖದಲ್ಲಿ ನಡೆದ ಪ್ರಕ್ರಿಯೆಯಲ್ಲಿ ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ರಿಜ್ವಾನ್ ರಝಾಕ್, ಪೆÇನ್ನಂಪೇಟೆ ಬ್ಲಾಕ್ ಅಧ್ಯಕ್ಷರಾಗಿ ಕೊಣಿಯಂಡ ಮುತ್ತಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ಆಬಿದ್ ಅತ್ತೂರ್, ನಾಪೆÇೀಕ್ಲು ಬ್ಲಾಕ್ ಅಧ್ಯಕ್ಷರಾಗಿ ಸುದೈ ನಾಣೈಯ್ಯ, ವೀರಾಜಪೇಟೆ ಬ್ಲಾಕ್ ಅಧ್ಯಕ್ಷರಾಗಿ ಉಮರ್ ಫಾರೂಕ್, ಉಪಾಧ್ಯಕ್ಷರಾಗಿ ಸಮೀರ್ ಹುಂಡಿ, ಕುಶಾಲನಗರ ಬ್ಲಾಕ್ ಅಧ್ಯಕ್ಷರಾಗಿ ದೇವಪ್ಪ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆಯಾಗಿದ್ದು, ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ನಾಪೆÇೀಕ್ಲು ಕಾಂಗ್ರೆಸ್ ಉಸ್ತುವಾರಿ ಶಾಹಿದ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಉಸ್ಮಾನ್ ಹಾಗೂ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶರಫು ಗೋಣಿಕೊಪ್ಪ, ಮಡಿಕೇರಿ ಕ್ಷೇತ್ರ ಉಪಾಧ್ಯಕ್ಷ ಮೈಸಿ ಕೊಟ್ಟಮುಡಿ, ವೀರಾಜಪೇಟೆ ಪಟ್ಟಣ ಪಂಚಾಯತಿ ಸದಸ್ಯ ಮೊಹಮ್ಮದ್ ರಾಫಿ, ವೀರಾಜಪೇಟೆ ನಗರ ಅಧ್ಯಕ್ಷ ರಕ್ಷಿತ್ ಕಾರ್ಯದರ್ಶಿ ರಜತ್, ಯುವ ಕಾಂಗ್ರೆಸ್ ಕಾರ್ಯಕರ್ತರುಗಳು ಹಾಜರಿದ್ದರು.