ಮಡಿಕೇರಿ, ಜೂ. 9: ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರು ಹಾಗೂ ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಆದಷ್ಟು ಶೀಘ್ರ ಕ್ರಮಕೈಗೊಳ್ಳುವದಾಗಿ ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದರು.ಜಿಲ್ಲಾ ಪಂಚಾಯಿತಿ ಭವನದಲ್ಲಿಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೊರೊನಾ ಸಂಬಂಧ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಚಿವರಿಗೆ ಮಾಹಿತಿಯಿತ್ತರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್ ಅವರು ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ವಾಹನಗಳ ಕೊರತೆ, ತಜ್ಞ ವೈದ್ಯರು ಹಾಗೂ ವೈದ್ಯರುಗಳ ಕೊರತೆ ಬಗ್ಗೆ ಸಚಿವರ ಗಮನ ಸೆಳೆದರು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲೆಯಲ್ಲಿ 24 ಎಂಬಿಬಿಎಸ್, 53 ತಜ್ಞ ವೈದ್ಯರ ಕೊರತೆ ಇರುವದಾಗಿ ಹೇಳಿದರು. ವೈದ್ಯಕೀಯ ಕಾಲೇಜಿನ ಡೀನ್ ಕಾರ್ಯಪ್ಪ ಅವರು ರೇಡಿಯಾಲಜಿಸ್ಟ್ ಹಾಗೂ ಲ್ಯಾಬ್ ಟೆಕ್ನಿಷಿಯನ್‍ಗಳ ಕೊರತೆ ಇರುವದಾಗಿ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ಆರೋಗ್ಯ ಇಲಾಖೆಯಲ್ಲಿ ಬಹಳಷ್ಟು ಹುದ್ದೆಗಳು ಖಾಲಿ ಇರುವದಾಗಿ ಗಮನ ಸೆಳೆದರು.ಕೊರತೆಗಳ ಬಗ್ಗೆ ಆಲಿಸಿದ ಸಚಿವ ಶ್ರೀರಾಮುಲು ಅವರು, ಕೊಡಗು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಜನತೆ ಅನುಸರಿಸಿದ ಕ್ರಮಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಅಲ್ಲದೇ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಉಂಟಾಗಿರುವ ಕೊರತೆಗಳನ್ನು ನೀಗಿಸುವಲ್ಲಿ ತಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಆಶ್ವಾಸನೆಯಿತ್ತರು.

ಗರ್ಭಿಣಿಯರ ಬಗ್ಗೆ ಕಾಳಜಿ

ಗರ್ಭಿಣಿಯರು ಆಸ್ಪತ್ರೆಗಳಿಗೆ ಆಗಮಿಸುವ ವೇಳೆ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸುವ ದರಿಂದ ರಾಯಚೂರಿನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ತೊಂದರೆ ಯಾಗಿರುವ ಬಗ್ಗೆ ತನ್ನ ಗಮನಕ್ಕೆ ಬಂದಿದೆ. ಆದ್ದರಿಂದ ಇನ್ನು ಮುಂದೆ ಕೊರೊನಾ ಹೆಚ್ಚಿರುವ ರೆಡ್‍ಜೋನ್ ಹಾಗೂ ಕಂಟೈನ್ಮೆಂಟ್ ಜೋನ್‍ಗಳಿಂದ ಬರುವ ಗರ್ಭಿಣಿಯರನ್ನು ಮಾತ್ರ ಪರೀಕ್ಷೆಗೊಳಪಡಿಸಬೇಕು. ಉಳಿದಂತೆ ಬೇರೆಡೆಗಳಿಂದ ಬರುವ ಗರ್ಭಿಣಿ ಯರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸದಿರಲು ತೀರ್ಮಾನಿಸ ಲಾಗಿದೆ ಎಂದರು.

ಹತ್ತನೇ ತರಗತಿ ಹಾಗೂ ಪಿಯು ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳ ಆರೋಗ್ಯವನ್ನು ಸೂಕ್ತ ಪರೀಕ್ಷೆಗೆ ಒಳಪಡಿಸಿ ನಿರಾತಂಕವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡ ಲಾಗುವುದು. ಈ ಸಂಬಂಧ ವಿದ್ಯಾರ್ಥಿಗಳು ಯಾವದೇ ಆತಂಕಕ್ಕೆ ಒಳಗಾಗದಂತೆ ಶ್ರೀರಾಮುಲು ಕಿವಿಮಾತು ಹೇಳಿದರು. ಶಾಲೆಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯಿಂದ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದ್ದು, ಆ ಸಮಿತಿಗಳ ವರದಿ ಪಡೆದು ನಂತರ ಶಾಲೆ ಪ್ರಾರಂಭ ಕುರಿತಂತೆ ಶಿಕ್ಷಣ ಇಲಾಖೆಗೆ ಸೂಕ್ತ ಸಲಹೆಗಳನ್ನು ನೀಡಲಾಗುವದು. ಮಹರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಬರುವವರನ್ನು 14 ದಿನ ಕಡ್ಡಾಯವಾಗಿ ಗೃಹ ಸಂಪರ್ಕ ತಡೆಗೆ ಒಳಪಡಿಸಲಾ ಗುವದಲ್ಲದೆ, ಅವರುಗಳ ಮನೆಯನ್ನು ಸೀಲ್‍ಡೌನ್ ಮಾಡುವ ಮೂಲಕ ಆಹಾರ ಇತ್ಯಾದಿ ವ್ಯವಸ್ಥೆಗಳನ್ನು ಒದಗಿಸಲಾಗುವ ದೆಂದರು. ಈ ಸಂದರ್ಭ ಎಸ್‍ಪಿ ಡಾ. ಸುಮನ್, ಜಿ. ಪಂ. ಸಿಇಓ ಲಕ್ಷ್ಮಿಪ್ರಿಯ ಇದ್ದರು.