ಮಡಿಕೇರಿ, ಜೂ. 9: ಕೊಡವ ಲ್ಯಾಂಡ್ ಜಿಯೋ-ಪೆÇಲಿಟಿಕಲ್ ಅಟೋನಮಿ, ಕೊಡವ ಬುಡಕಟ್ಟು ಕುಲವನ್ನು ಎಸ್.ಟಿ. ಪಟ್ಟಿಯ ಮೂಲಕ ರಾಜ್ಯಾಂಗ ಖಾತ್ರಿಗೆ ಒಳಪಡಿಸಬೇಕು ಮತ್ತು ವಿಶ್ವ ಸಂಸ್ಥೆಯ ಯುನೆಸ್ಕೋದ ಇಂಟ್ಯಾಂಜಿಬಲ್ ಕಲ್ಚರಲ್ ಹೆರಿಟೇಜ್ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಸಿ.ಎನ್.ಸಿ ಆಶ್ರಯದಲ್ಲಿ ಸತ್ಯಾಗ್ರಹ ನಡೆಯಿತು.

ಜ್ಞಾಪನಾ ಪತ್ರವನ್ನು ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ಕೇಂದ್ರ ಗೃಹಮಂತ್ರಿ, ಕರ್ನಾಟಕದ ಮುಖ್ಯಮಂತ್ರಿಗಳು, ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ, ಯುನೆಸ್ಕೊದ ನಿರ್ದೇಶಕರು, ವಿಶ್ವಸಂಸ್ಥೆಯ ಮಾನವ ಅಧಿಕಾರ ಅಯೋಗದ ಹೈ ಕಮಿಷನರ್, ಕೇಂದ್ರ ಬುಡಕಟ್ಟು ಮಂತ್ರಿ ಮತ್ತು ಅರ್ಥಶಾಸ್ತ್ರಜ್ಞ ಡಾ. ಸುಬ್ರಮಣ್ಯನ್ ಸ್ವಾಮಿ ಅವರಿಗೆ ಕಳುಹಿಸಿ ಕೊಡಲಾಗಿದೆ.