ಮಡಿಕೇರಿ, ಜೂ. 10: ಕೊರೊನಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟ ಎದುರಿಸುತ್ತಿರುವ ನಗರದ ಅಶೋಕಪುರದ ಬಡ ಕುಟುಂಬಗಳಿಗೆ ಕೊಡಗು ಜಿಲ್ಲಾ ದಸಂಸ ವತಿಯಿಂದ ಆಹಾರದ ಕಿಟ್ ವಿತರಿಸಲಾಯಿತು.

ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ನೇತೃತ್ವದಲ್ಲಿ ಸಮಿತಿಯ ಪದಾಧಿಕಾರಿಗಳು ಮನೆಮನೆಗೆ ತೆರಳಿ ಸಾಮಾಜಿಕ ಅಂತರ ಕಾಯ್ದುಕೊಂಡು ದಿನಸಿ ಕಿಟ್‍ಗಳನ್ನು ನೀಡಿದರು.

ಸಮಿತಿಯ ಮಡಿಕೇರಿ ತಾಲೂಕು ಸಂಚಾಲಕ ಎ.ಪಿ. ದೀಪಕ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕಿ ನಿರ್ಮಲ ಮತ್ತಿತರರು ಹಾಜರಿದ್ದರು.