ಪೆÇನ್ನಂಪೇಟೆ: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೊರೊನಾ ವಾರಿಯರ್ಸ್ಗಳಾಗಿ ಕಾರ್ಯನಿರ್ವಹಿಸುತ್ತಿರುವ ಪೆÇನ್ನಂಪೇಟೆ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಹಾಗೂ ಪೆÇನ್ನಂಪೇಟೆ ಕಿರಿಯ ಅರೋಗ್ಯ ಕೇಂದ್ರದ ಸ್ಟಾಫ್ ನರ್ಸ್ಗಳ ಸೇವೆಯನ್ನು ಪರಿಗಣಿಸಿ ಪೆÇನ್ನಂಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಆಶಾ ಕಾರ್ಯಕರ್ತೆಯರು ಹಾಗೂ ಸ್ಟಾಫ್ ನರ್ಸ್ಗಳಿಗೆ 1 ಸಾವಿರ ರೂಪಾಯಿ ಪೆÇ್ರೀತ್ಸಾಹ ಧನ ಹಾಗೂ ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು.
ಈ ಸಂದÀರ್ಭ ಪೆÇನ್ನಂಪೇಟೆ ಗ್ರಾ.ಪಂ. ಅಧ್ಯಕ್ಷೆ ಮೂಕಳೇರ ಸುಮಿತ್ರ, ಉಪಾಧ್ಯಕ್ಷೆ ಮಂಜುಳಾ, ಪಿಡಿಒ ಪುಟ್ಟರಾಜು, ಗ್ರಾ.ಪಂ. ಸದಸ್ಯರುಗಳು ಇದ್ದರು.ಕುಶಾಲನಗರ: ಕುಶಾಲನಗರ ಸಮೀಪದ ಟಿಬೇಟಿಯನ್ ನಿರಾಶ್ರಿತರ ಶಿಬಿರ ಗೋಲ್ಡನ್ ಟೆಂಪಲ್ ವತಿಯಿಂದ ಕುಶಾಲನಗರದ ಪೆÇಲೀಸ್ ಇಲಾಖೆಯ ಕೊರೊನಾ ವಾರಿಯರ್ಸ್ಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಗೋಲ್ಡನ್ ಟೆಂಪಲ್ನ ಆಡಳಿತ ಟ್ರಸ್ಟಿ ತುಲೋಕ್ ಚೋಡೆನ್ ನೇತೃತ್ವದಲ್ಲಿ ಪೆÇಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು.
ಪೊಲೀಸ್ ಉಪ ಅಧೀಕ್ಷಕ ಶೈಲೇಂದ್ರ, ವೃತ್ತ ನಿರೀಕ್ಷಕ ಮಹೇಶ್, ಪಟ್ಟಣ ಠಾಣಾಧಿಕಾರಿ ವೆಂಕಟರಮಣ, ಗ್ರಾಮಾಂತರ ಠಾಣಾಧಿಕಾರಿ ನಂದೀಶ್ ಮತ್ತು ಪೆÇಲೀಸ್ ಸಿಬ್ಬಂದಿಗಳು ಗೌರವ ಸ್ವೀಕರಿಸಿದರು.