ಮಡಿಕೇರಿ ಜೂ. 11 : ಕುಶಾಲನಗರದ ಕಿಸಾನ್ ಘಟಕದ ಅಧ್ಯಕ್ಷರಾಗಿ ಹಂಡ್ಲಿ ಗ್ರಾಮ ಪಂಚಾಯ್ತಿಯ ಹಿರಿಯ ಕಾಂಗ್ರೆಸ್ ಸದಸ್ಯ ಲಿಂಗರಾಜು ಆಯ್ಕೆಯಾಗಿದ್ದಾರೆ. ಇವರನ್ನು ಕುಶಾಲನಗರ ಬ್ಲಾಕ್ ಅಧ್ಯಕ್ಷ ಅನಂತರಾಮ್ ಅವರ ಶಿಫಾರಸ್ಸಿನ ಮೇರೆಗೆ ನೇಮಿಸಲಾಗಿದೆ ಎಂದು ಕೊಡಗು ಜಿಲ್ಲಾ ಕಿಸಾನ್ ಘಟಕ ಅಧ್ಯಕ್ಷ ನೆರವಂಡ ಉಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.