ಗೋಣಿಕೊಪ್ಪಲು, ಜೂ.11: ಸಂಬಂಧಗಳು ಹಾಳಾಗುವುದರಿಂದ ಜೀವನದಲ್ಲಿ ನೆಮ್ಮದಿಯ ಬದುಕು ಕಾಣಲು ಸಾಧ್ಯವಿಲ್ಲ. ಗ್ರಾಮದಲ್ಲಿ ಏನೇ ಸಮಸ್ಯೆ ಬಂದರೂ ಒಂದೆಡೆ ಕುಳಿತು ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಾಯಮುಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆಮ್ಮತ್ತಿ ಗ್ರಾಮದಲ್ಲಿ ಒಂದೇ ಕೋಮಿನ ನಡುವೆ ನಡೆದ ಹಲ್ಲೆ ಪ್ರಕರಣ ಸಂಬಂಧ ಉಭಯ ಕಡೆಯ ಮನೆಗೆ ತೆರಳಿ ಮಾತುಕತೆ ನಡೆಸಿದರು. ಈ ಸಂದರ್ಭ ಗ್ರಾಮದ ಹಿರಿಯರು,ಯುವಕರು ನಡೆದ ಘಟನೆಯ ಬಗ್ಗೆ ಅಧ್ಯಕ್ಷರ ಮುಂದೆ ಅಭಿಪ್ರಾಯ ಮಂಡಿಸಿದರು.
ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರುವುದರಿಂದ ಮುಂದೆ ಇದನ್ನು ಒಟ್ಟಾಗಿ ಕುಳಿತು ಸೌಹಾರ್ಧಯುತವಾಗಿ ಚರ್ಚಿಸಿ ಬಗೆ ಹರಿಸಿಕೊಳ್ಳೋಣ ಎಂದು ಗ್ರಾಮಸ್ಥರಿಗೆ ತಿಳುವಳಿಕೆ ನೀಡಿದರು. ಭೇಟಿಯ ಸಂದರ್ಭ ಜಿಲ್ಲಾ ಕಾಂಗ್ರೆಸ್ ವಕ್ತಾರ ಸುರೇಶ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಕಾರ್ಯದರ್ಶಿ ಬಾಲಕೃಷ್ಣ, ಜಿಲ್ಲಾ ಕಾಂಗ್ರೆಸ್ ಸದಸ್ಯ ಮುಕ್ಕಾಟೀರ ಸಂದೀಪ್, ಎ.ಜೆ.ಬಾಬು, ಆಪಟ್ಟೀರ ಟಾಟೂ ಮೊಣ್ಣಪ್ಪ, ಕಾಂಗ್ರೆಸ್ ಅಲ್ಪ ಸಂಖ್ಯಾತ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಉಸ್ಮಾನ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಆಲೀರ ರಶೀದ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫ್, ಪಕ್ಷದ ಮುಖಂಡರಾದ ಮಹಮ್ಮದ್ ರಾಫಿ, ಕಾನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಕಾಡ್ಯಮಾಡ ಬೋಪಣ್ಣ, ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.