ಮಡಿಕೇರಿ, ಜೂ. 11: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಒಂದು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಸಾಧನೆ ಬಗ್ಗೆ ಮನೆ ಮನೆಗಳಿಗೆ ಕರಪತ್ರ ಹಂಚುವ ಕಾರ್ಯ ಮಡಿಕೇರಿಯಲ್ಲಿ ನಡೆಯಿತು. ವಿಧಾನಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ನೇತೃತ್ವದಲ್ಲಿ ಅಭಿಯಾನದ ಜಿಲ್ಲಾ ಸಂಯೋಜಕ ಬಿ.ಕೆ. ಜಗದೀಶ್, ಬಿಜೆಪಿ ಮಡಿಕೇರಿ ನಗರಾಧ್ಯಕ್ಷ ಮನು ಮಂಜುನಾಥ್, ಮಾಜಿ ಅಧ್ಯಕ್ಷ ಮಹೇಶ್ ಜೈನಿ, ಪ್ರಮುಖರಾದ ಎಸ್.ಸಿ. ಸತೀಶ್, ಉಮೇಶ್ ಸುಬ್ರಮಣಿ, ಬಿ.ಎಂ. ರಾಜೇಶ್, ಗಣೇಶ್ ಇನ್ನಿತರರು ಮನೆ ಮನೆಗಳಿಗೆ ತೆರಳಿ ಕರಪತ್ರ ಹಂಚಿದರು.