ಕೊಡ್ಲಿಪೇಟೆ, ಜೂ. 12: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕೊಡ್ಲಿಪೇಟೆ ಮತ್ತು ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ನಿರ್ವಹಿಸು ತ್ತಿರುವ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ವಿತರಿಸಲಾಯಿತು.

ಸಂಘದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಎಸ್.ಡಿ. ತಮ್ಮಯ್ಯ ಸೇರಿದಂತೆ ನಿರ್ದೇಶಕರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿದರು.

ಕೊರೊನಾ ಆತಂಕದ ನಡುವೆಯೂ ಆಶಾ ಕಾರ್ಯಕರ್ತೆ ಯರು ಗ್ರಾಮದ ಪ್ರತಿ ಮನೆಗಳಿಗೂ ಭೇಟಿ ನೀಡಿ ಜಾಗೃತಿ ಮೂಡಿಸುವ ಮೂಲಕ ಶ್ಲಾಘನೀಯ ಕಾರ್ಯ ಮಾಡಿದ್ದಾರೆ ಎಂದು ಸಂಘದ ಅಧ್ಯಕ್ಷ ತಮ್ಮಯ್ಯ ಅವರು ಶ್ಲಾಘಿಸಿದರು.

ಆಶಾ ಕಾರ್ಯಕರ್ತೆಯರೊಂದಿಗೆ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಯ ಸಿಬ್ಬಂದಿಗಳೂ ಸಹ ಶಕ್ತಿಮೀರಿ ಸೇವೆ ಸಲ್ಲಿಸಿದ್ದಾರೆ ಎಂದು ಬ್ಯಾಂಕ್‍ನ ನಿರ್ದೇಶಕರಾದ ಬಿ.ಕೆ. ಚಿಣ್ಣಪ್ಪ ಸ್ಮರಿಸಿದರು. ಈ ಸಂದರ್ಭ ಸಂಘದ ನಿರ್ದೇಶಕರಾದ ಕೆ.ಸಿ. ಪ್ರಸನ್ನ, ಸುಬ್ರಹ್ಮಣ್ಯಾಚಾರ್, ಎ.ಎನ್. ಭಾನುಮತಿ, ಬಿ.ಈ. ರಾಜು, ವಹಾಬ್, ತೇಜಕುಮಾರ್, ಮಲ್ಲೇಶ್, ಅಶೋಕ್ ಕುಮಾರ್, ರಂಜಿತಾ ಲೋಕೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಡಿ. ನಾಗರಾಜ್ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.