ಮಡಿಕೇರಿ, ಜೂ. 12: ಪೊನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ನ್ನಾಗಿ ಹಳ್ಳಿಗಟ್ಟು ಗ್ರಾಮದ ಕೋಳೆರ ಯಮುನಾ (ಭಾರತಿ) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್ ತಿಳಿಸಿದ್ದಾರೆ.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್ ಅವರ ಆದೇಶದ ಮೇರೆಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.