ಮಡಿಕೇರಿ, ಜೂ. 12: ಕೊರೊನಾ ಲಾಕ್‍ಡೌನ್‍ನಿಂದ ಸಂಕಷ್ಟ ಎದುರಿಸುತ್ತಿರುವ ಚಾಲಕರುಗಳಿಗೆ ಪರಿಹಾರಧನ ವಿತರಿಸಲು ಸರ್ಕಾರ ವಿಧಿಸಿರುವ ನಿಯಮಗಳು ಕ್ಲಿಷ್ಟಕರವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶಾಫಿ ಕೊಟ್ಟಮುಡಿ ನಿಯಮವನ್ನು ಸರಳೀಕರಣಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆಟೋ ರಿಕ್ಷಾ, ಮಿನಿ ಕ್ಯಾಬ್, ಕಾರು, ಲಘು ವಾಹನ ಚಾಲಕರಿಗಾಗಿ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರ ಧನ ನಿಯಮದಲ್ಲಿನ ಕೆಲವು ಗೊಂದಲದಿಂದಾಗಿ ಕೈತಪ್ಪುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.