ಗೋಣಿಕೊಪ್ಪ ವರದಿ, ಜೂ. 12: ಗ್ರಾಮ ಪಂಚಾಯಿತಿ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೊನ್ನಂಪೇಟೆ ಸಾಮಥ್ರ್ಯ ಸೌಧದಲ್ಲಿರುವ ತಾಲೂಕು ಕಾರ್ಯನಿರ್ವಹಣಾಧಿಕಾರಿ ಕಚೇರಿ ಎದುರು ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸಾಂಕೇತಿಕ ಧರಣಿ ನಡೆಯಿತು.
ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಅಪ್ಪಣ್ಣ ಮನವಿ ಸ್ವೀಕರಿಸಿ ಮಾತನಾಡಿ, ಮೇಲಧಿಕಾರಿಗಳಿಗೆ ಮನವಿ ಪತ್ರ ತಲುಪಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಭರತ್ ಮಾತನಾಡಿ, ವೇತನ ಪಾವತಿ ವಿಷಯದಲ್ಲಿ ತಾರತಮ್ಯ ನೀತಿ ಸರಿ ಪಡಿಸಬೇಕು. ಸೂಕ್ತ ಸಮಯದಲ್ಲಿ ವೇತನ ಪಾವತಿಯಾಗಬೇಕು. ಅಧಿಕಾರಿಗಳು ನೌಕರರಿಗೆ ಹೆಚ್ಚುವರಿ ಕೆಲಸಗಳನ್ನು ನೀಡುತ್ತಿದ್ದಾರೆ. ನೌಕರರ ಸಮಸ್ಯೆಗಳ ಕಡೆಗೆ ಗಮನ ಹರಿಸುತ್ತಿಲ್ಲ ಎಂದು ಹೇಳಿದರು.
ಈ ಸಂದರ್ಭ ತಾಲೂಕು ಅಧ್ಯಕ್ಷ ಎಂ.ಬಿ. ಹರೀಶ್, ಕಾರ್ಯದರ್ಶಿ ಹೆಚ್.ಆರ್. ನವೀನ್ಕುಮಾರ್ ಉಪಸ್ಥಿತರಿದ್ದರು.