ಮಡಿಕೇರಿ, ಜೂ.12: ತಾ. 18 ರಂದು ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವಲಿಂಗ ಶೆಟ್ಟಿ ತಿಳಿಸಿದ್ದಾರೆ.
ಜಿಲ್ಲೆಯ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 5,927 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 477 ಹೊರ ಜಿಲ್ಲೆಯ ಮತ್ತು 5 ಹೊರ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.