ಮಡಿಕೇರಿ, ಜೂ. 13: ಕೊರೊನಾ ವೈರಸ್ ಭಾರತವನ್ನು ಪ್ರವೇಶಿಸುವು ದನ್ನು ತಡೆಗಟ್ಟಲು ಸಕಾಲಿಕ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಜನಪರ ಬೇಡಿಕೆಗಳನ್ನು ಅನುಷ್ಠಾನಕ್ಕೆ ತರುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾಕ್ರ್ಸ್ವಾದಿ) ದೇಶವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ತಾ. 16 ರಂದು ಪೂರ್ವಾಹ್ನ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಎದುರು ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.