ಮಡಿಕೇರಿ, ಜೂ. 13: ಜಿಲ್ಲಾ ಪತ್ರಕರ್ತರ ಸಂಘದ ಖಜಾಂಚಿಯಾಗಿ ಕಸ್ತೂರಿ ಟಿವಿ ಜಿಲ್ಲಾ ವರದಿಗಾರ ಪ್ರೇಮ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದ್ದು, ನಿರ್ದೇಶಕರಾಗಿ ವಿಜಯಕರ್ನಾಟಕ ವರದಿಗಾರ ಹೆಚ್.ವಿ. ವಿನೋದ್ ಅವರನ್ನು ಆಯ್ಕೆ ಮಾಡಲಾಗಿದೆ. ಪತ್ರಿಕಾಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ ತಿಳಿಸಿದ್ದಾರೆ