ಮಡಿಕೇರಿ, ಜೂ. 13: ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಯೋಜನೆ ಅಡಿಯಲ್ಲಿ 2019ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಅರ್ಹ ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಹ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ hಣಣಠಿ://seಡಿviಛಿeoಟಿಟiಟಿe.gov.iಟಿ/ಞಚಿಡಿಟಿಚಿಣಚಿಞಚಿ ಮೂಲಕ ಆನ್‍ಲೈನ್‍ನಲ್ಲಿ ಜುಲೈ, 10 ರೊಳಗೆ ಅರ್ಜಿ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ತಿಳಿಸಿದ್ದಾರೆ.