*ಸಿದ್ದಾಪುರ, ಜೂ. 13: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ನಲ್ವತ್ತೆಕರೆ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು ರೂ. 50 ಲಕ್ಷ ವೆಚ್ಚದಲ್ಲಿ ನಾಲೆಯನ್ನು ನಿರ್ಮಿಸಲಾಗುತ್ತಿದೆ. ಇದು ನಿಷ್ಪ್ರಯೋಜಕ ಯೋಜನೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಪ್ರದೇಶದಲ್ಲಿ ಇರುವ ಗದ್ದೆಗಳಿಗೆ ಏತ ನೀರಾವರಿ ಮೂಲಕ ನೀರನ್ನು ಹಾಯಿಸಲು ಸರ್ಕಾರದ ಅನುಮೋದನೆಯಂತೆ ಕಾಮಗಾರಿಯನ್ನು ನಡೆಸಲಾಗುತ್ತಿದೆ.

ಆದರೆ ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ಕಾಫಿ, ಅಡಿಕೆ, ಬಾಳೆ ತೋಟಗಳು ಮತ್ತು ಮನೆಗಳು ಇವೆ ಹೊರತು ಯಾವುದೇ ಗದ್ದೆಗಳಿಲ್ಲ. ಆದರೂ ಗದ್ದೆಗಳಿಗೆ ನೀರು ಹಾಯಿಸಲೆಂದು ಯೋಜನೆಯನ್ನು ರೂಪಿಸಿ ಸರ್ಕಾರದ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ಸ್ಥಳೀಯ ಬೆಳೆಗಾರ ಮಾಚಿಮಾಡ ರಘು ಕಾರ್ಯಪ್ಪ ಆರೋಪಿಸಿದ್ದಾರೆ.