ಮಡಿಕೇರಿ, ಜೂ. 14: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪುಟಗಳಿಗೆ ಏಕಲವ್ಯ ಪ್ರಶಸ್ತಿಯನ್ನು ಹಾಗೂ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಪ್ರತಿಭಾನ್ವಿತ ಅರ್ಹ ಕ್ರೀಡಾಪಟುಗಳು 2019ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಇಲಾಖಾ ಅಧಿಕೃತ ಜಾಲತಾಣ hಣಣಠಿ://seಡಿviಛಿeoಟಿಟiಟಿe.gov.iಟಿ/ಞಚಿಡಿಟಿಚಿಣಚಿಞಚಿ ಹಾಗೂ ಹಿರಿಯ ಕ್ರೀಡಾಪಟು, ತರಬೇತುದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಇಲಾಖಾ ಅಧಿಕೃತ ಜಾಲತಾಣ hಣಣಠಿ://seಡಿviಛಿeoಟಿಟiಟಿe.gov.iಟಿ/ಞಚಿಡಿಟಿಚಿಣಚಿಞಚಿ ಮೂಲಕ ಆನ್‍ಲೈನ್‍ನಲ್ಲಿ ಜುಲೈ, 10 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ತಿಳಿಸಿದ್ದಾರೆ.