ವೀರಾಜಪೇಟೆ, ಜೂ. 14: ವೀರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಿವಿಧ ರಾಜಕಾಲುವೆ, ಚರಂಡಿ, ಮೋರಿಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಪಟ್ಟಣದ ಎಲ್ಲಾ ವಾರ್ಡ್‍ಗಳಲ್ಲಿಯೂ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ವೀರಾಜಪೇಟೆ ಪ.ಪಂ. ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ತಿಳಿಸಿದರು.