ಮಡಿಕೇರಿ, ಜೂ. 15 : ಅರಕಲಗೂಡು ಮಲ್ಲಿಪಟ್ಟಣದಿಂದ ಶನಿವಾರಸಂತೆಗೆ ಸರಬರಾಜಾಗುತ್ತಿರುವ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ಕೆಪಿಟಿಸಿಎಲ್ ಅವರು ನಿರ್ವಹಿಸಬೇಕಿರುವುದರಿಂದ ತಾ. 16 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಶನಿವಾರಸಂತೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತ ಗೊಳಿಸಲಾಗುವುದು. ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಗೋಪಾಲಪುರ, ಬಲ್ಲಾರಳ್ಳಿ, ಕಿತ್ತೂರು, ಗೌಡಳ್ಳಿ, ನಿಡ್ತ, ಅಂಕನಹಳ್ಳಿ, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಕೋರಿದ್ದಾರೆ.