ಪಾಲಿಬೆಟ್ಟ, ಜೂ. 15: ಕಳೆದ ಹಲವು ತಿಂಗಳಿಂದ ಪಾಲಿಬೆಟ್ಟ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತಿದ್ದು. ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿರುವ ಚೆಸ್ಕಾಂ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಲು ನಿರ್ಧರಿಸಿರು ವುದಾಗಿ ಗ್ರಾಮಸ್ಥರ ಪರವಾಗಿ ಮಾತನಾಡಿದ ಸಮಾಜ ಸೇವಕ ಕಾಡ್ಯಮಾಡ ಪುತ್ರ ಪೆÇಣಚ್ಚ ಎಚ್ಚರಿಕೆ ನೀಡಿದ್ದಾರೆ.

ಬೆಳೆಗಾರರು ಕೂಲಿ ಕಾರ್ಮಿಕರೇ ಹೆಚ್ಚಾಗಿರುವ ಪಾಲಿಬೆಟ್ಟ ಸುತ್ತಮುತ್ತಲ ವ್ಯಾಪ್ತಿಯಲ್ಲಿ ದಿನೇ ದಿನೇ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತಿದ್ದು ಇದರಿಂದ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದೆ. ವಿದ್ಯುತ್ ನಂಬಿ ದಿನ ಕಳೆಯುತ್ತಿರುವ ಗ್ರಾಮಸ್ಥರು ಕತ್ತಲ್ಲಿನಲ್ಲಿ ಜೀವನ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಪಾಲಿಬೆಟ್ಟ ಸುತ್ತಮುತ್ತಲ ಗ್ರಾಮ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಉಪಟಳ ಅಧಿಕವಾಗಿದ್ದು ವಿದ್ಯುತ್ ಬೆಳಕಿಲ್ಲದೆ. ಸಾರ್ವಜನಿಕರು ನಡೆ ದಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್‍ಡೌನ್ ವಿಧಿಸಿದ ಸಂದರ್ಭ ದಲ್ಲೂ ಕೆಲಸ ಕಾರ್ಯ ಗಳಿಲ್ಲದೇ ಉದ್ಯೋಗ ದಲ್ಲಿರುವ ಹಲವು ಮಂದಿ ಮನೆಯಲ್ಲಿ ಕುಳಿತು ಕೆಲಸ ಪ್ರಾರಂಭಿಸಲು ವಿದ್ಯುತ್ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಇದೀಗ ಕಂಗಾಲಾಗಿದ್ದಾರೆ.

(ಮೊದಲ ಪುಟದಿಂದ) ಪಾಲಿಬೆಟ್ಟಕ್ಕೆ ಎಕ್ಸ್ ಎಕ್ಸ್‍ಪ್ರೆಸ್ ವಿದ್ಯುತ್ ಲೈನ್ ಅಳವಡಿಸಲು ಈ ಹಿಂದೆ ಚೆಸ್ಕಾಂ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ನೀಡಲಾಗಿದ್ದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ವಿರುದ್ಧ ಕಾರ್ಮಿಕರು, ಬೆಳೆಗಾರರು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ಮಾಡ ಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗ್ರಾಮದ ನಿವಾಸಿ ರಿನೀಶ್ ಮಾತನಾಡಿ ಪಾಲಿಬೆಟ್ಟ ಗ್ರಾಮದ ಸುತ್ತಮುತ್ತಲಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತಿರುವುದರಿಂದ ಸಾರ್ವಜನಿಕರು ಸಮಸ್ಯೆ ಗೊಳಗಾಗಿದ್ದಾರೆ. ಮುಂದಿನ ಏಳು ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಈ ಸಂದರ್ಭ ಗ್ರಾಮದ ಪ್ರಮುಖರಾದ ವಿನ್ಸೆಂಟ್, ದೂಜಾ ವೇಗಸ್ ಇದ್ದರು.

-ಪುತ್ತಂ ಪ್ರದೀಪ್