ಸಿದ್ದಾಪುರ, ಜೂ. 16: ಕುಶಾಲನಗರದ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಮೀನುಕೊಲ್ಲಿ ಅರಣ್ಯ ವ್ಯಾಪ್ತಿಯ ಅಭ್ಯತ್‍ಮಂಗಲ, ವಾಲ್ನೂರು -ತ್ಯಾಗತ್ತೂರು, ಅರೆಕಾಡು, ನೆಲ್ಲಿಹುದಿಕೇರಿ, ಬೆಟ್ಟದಕಾಡು ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡನ್ನು ಕಾಡಿಗಟ್ಟುವ ಕಾರ್ಯಾಚರಣೆ ತಾ. 17 ರಂದು (ಇಂದು) ನಡೆಯಲಿದೆ ಎಂದು ಉಪವಲಯ ಅರಣ್ಯಾಧಿಕಾರಿ ಕೂಡಕಂಡಿ ಸುಬ್ರಾಯ ತಿಳಿಸಿದ್ದಾರೆ. ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ಕಾರ್ಯಾಚರಣೆ ನಡೆಯಲಿದ್ದು, ಈ ಭಾಗದ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಅವರು ಮನವಿ ಮಾಡಿದ್ದಾರೆ.