ನಾಪೆÇೀಕ್ಲು, ಜೂ. 16: ಕಾಡಾನೆ ತಿವಿದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯವಕಪಾಡಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.ಗ್ರಾಮದ ಕುಡಿಯರ ಚಿಣ್ಣಪ್ಪ (70) ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ದುರ್ದೈವಿ. ಇವರು ಸಮೀಪದ ನಾಲಡಿ ಗ್ರಾಮದ ಪೂಮಾಲೆ ಎಸ್ಟೇಟ್‍ನಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಸೋಮವಾರ ಸಂಜೆ ಕೆಲಸ ಮುಗಿಸಿಕೊಂಡು ಯವಕಪಾಡಿ ಗ್ರಾಮದ ತನ್ನ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮಂಗಳವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಆರ್.ಎಫ್.ಓ ಹೆಚ್.ಜಿ. ದೇವರಾಜ್, ಉಪ ವಲಯ ಅರಣ್ಯಾಧಿಕಾರಿ ಶ್ರೀಧರ್, ಕಾಳೇಗೌಡ ಎಸ್. ಮತ್ತು ಸಿಬ್ಬಂದಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಬಗ್ಗೆ ನಾಪೆÇೀಕ್ಲು ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆಸಿದ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಸ್ಥಳಕ್ಕೆ ಠಾಣಾಧಿಕಾರಿ ಆರ್.ಕಿರಣ್, ಪೆÇ್ರಬೆಷನರಿ ಎಸ್.ಐ ಜಗದೀಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಮುಂದಿನ ಕ್ರಮಕೈಗೊಂಡಿದ್ದಾರೆ.
ಮೃತರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ. ಈಗಾಗಲೇ ಚಿಣ್ಣಪ್ಪ ಕುಟುಂಬಕ್ಕೆ ರೂ. 1 ಲಕ್ಷ ಪರಿಹಾರ ನೀಡಲಾಗಿದ್ದು, ಉಳಿದ 6.50 ಲಕ್ಷ ಹಣವನ್ನು ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ನೀಡಲಾಗುವುದು ಎಂದು ಆರ್‍ಎಫ್‍ಓ ದೇವರಾಜ್ ತಿಳಿಸಿದ್ದಾರೆ.