ಪೆರಾಜೆ, ಜೂ. 18: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ತಾ. 18 ರಂದು (ಇಂದು) ಪೆರಾಜೆಯ ವಿವಿಧ ಭಾಗಗಳಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ ಬಿ.ಎ.ಹರೀಶ್, ಶ್ರೀಮತಿ ಕವಿತಾ ಪ್ರಭಾಕರ್, ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮಿ ಧರಣೀಧರ್, ತಾ.ಪಂ. ಸದಸ್ಯ ನಾಗೇಶ್ ಕುಂದಲ್ಪಾಡಿ, ನಂಜಪ್ಪ ನಿಡ್ಯಮಲೆ ಸೇರಿದಂತೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.