ಮಡಿಕೇರಿ, ಜೂ.17 : ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷರು ಹಾಗೂ ಮಲೆನಾಡಿನ ಭೂಕುಸಿತ ಅಧ್ಯಯನ ಸಮಿತಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ತಾ. 20 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 8.30 ಗಂಟೆಗೆ ಕೊಡಗು ಜಿಲ್ಲೆಯ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ನಂತರ 5 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.