ಮಡಿಕೇರಿ, ಜೂ. 17: ಮುಂಗಾರು ಮಳೆಗೂ ಮುನ್ನ ಅಯ್ಯಂಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಯ್ಯಂಗೇರಿ ಯುವ ಕಾಂಗ್ರೆಸ್ ಕಳೆದ ತಿಂಗಳು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು.
ಆದರೆ ಇದುವರೆಗೆ ಗ್ರಾಮ ಪಂಚಾಯಿತಿಯಿಂದ ಯಾವುದೇ ರೀತಿಯ ಮುಂಜಾಗ್ರತಾ ಕ್ರಮಕೈಗೊಂಡಿಲ್ಲ ಎಂದು ಜಿಲ್ಲಾ ಎನ್.ಎಸ್.ಯು.ಐ. ಉಪಾಧ್ಯಕ್ಷ ಅಬ್ದುಲ್ ರಾಶಿದ್ ಆರೋಪಿಸಿದ್ದಾರೆ. ಮುಂದಿನ 15 ದಿನದೊಳಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳದಿದ್ದಲ್ಲಿ ಪಂಚಾಯಿತಿಯ ವಿರುದ್ಧ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.
ಗೋಷ್ಠಿಯಲ್ಲಿ ಅಯ್ಯಂಗೇರಿ ಯುವ ಕಾಂಗ್ರೆಸ್ ಪ್ರಮುಖರಾದ ಅಬ್ದುಲ್ ಜಲೀಲ್, ರವೂಫ್ ಪಿ.ಎಸ್., ಇಸ್ಮಾಯಿಲ್, ಹಿರಿಯರಾದ ಬಡುವಂಡ ಮೊೈದು ಇದ್ದರು.