ಮಡಿಕೇರಿ, ಜೂ. 17: ಸರ್ಕಾರದ ಮಾರ್ಗಸೂಚಿ, ಆದೇಶದಂತೆ ಲಾಕ್‍ಡೌನ್ ಸಂಬಂಧ ಸ್ವೀಕೃತವಾದ ಕಾರ್ಯ ವಿಧಾನದ ಬಗ್ಗೆ ತಾ.8ರಂದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಧಾರ್ಮಿಕ ಮುಖಂಡರುಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿರುತ್ತದೆ.
ಕೊಡಗು ಜಿಲ್ಲೆಯ ತ್ರಿವೇಣಿ ಸಂಗಮದಲ್ಲಿ ಪಿಂಡ ಪ್ರದಾನ ಮಾಡುವ ಸಂಬಂಧ ವಿಚಾರವಾಗಿ ಸಭೆಯಲ್ಲಿ ಚರ್ಚಿಸಲಾಗಿರುತ್ತದೆ. ಚರ್ಚಿಸಿದಂತೆ, ಮುಜರಾಯಿ ಇಲಾಖೆಯ ಅಧೀನಕ್ಕೆ ಬರುವ ದೇವಾಲಯಗಳಲ್ಲಿ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಮುಜರಾಯಿ ಇಲಾಖೆ ಕಾಲ ಕಾಲಕ್ಕೆ ಹೊರಡಿಸಿರುವ, ಹೊರಡಿಸುವ ಕಾರ್ಯಸೂಚಿಗಳನ್ನು ಉಲ್ಲಂಘನೆಯಾಗದಂತೆ ಪಾಲಿಸುತ್ತಾ, ನಿಯಮಾನುಸಾರ ಅಗತ್ಯ ಕ್ರಮಗಳನ್ನು ಸಂಬಂಧಪಟ್ಟ ದೇವಾಲಯ ಆಡಳಿತ ಮಂಡಳಿ ವತಿಯಿಂದ ಕೈಗೊಳ್ಳುವುದಾಗಿ ತಿಳಿಸಿದಂತೆ, ಅಗತ್ಯ ಕ್ರಮಗಳನ್ನು ಸಂಬಂಧಪಟ್ಟ ದೇವಾಲಯಗಳ ಆಡಳಿತ ಮಂಡಳಿಯು ಕೈಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.