ಶನಿವಾರಸಂತೆ, ಜೂ. 17: ಹಂಡ್ಲಿ ಪಂಚಾಯಿತಿ ವ್ಯಾಪ್ತಿಯ ಬೆಳಾರಳ್ಳಿ ಗ್ರಾಮದ ಬಸ್ ನಿಲ್ದಾಣಕ್ಕೆ ರಸ್ತೆ ದಾಟುತ್ತಿದ್ದ ವೃದ್ಧೆ ಸಿದ್ಧಲಿಂಗಮ್ಮ (80) ಅವರಿಗೆ ಮಲ್ಲಿಪಟ್ಟಣದ ಕಡೆಯಿಂದ ಬಂದ ಮೋಟಾರ್ ಸೈಕಲ್ (ಕೆಎ 13 ಇಸಿ 9215) ಡಿಕ್ಕಿಪಡಿಸಿದ ಪರಿಣಾಮ ತಲೆ, ಕಣ್ಣು, ಕೈಗೆ ಗಾಯಪಡಿಸಿದ ಪ್ರಕರಣ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಗಾಯಾಳುವನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ. ಮಗಳು ಉಷಾ ನೀಡಿದ ದೂರಿನ ಮೇರೆ ಶನಿವಾರಸಂತೆ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಕೃಷ್ಣೇಗೌಡ ಮೋಟಾರ್ ಸೈಕಲನ್ನು ವಶಪಡಿಸಿಕೊಂಡು, ಕಲಂ 279, 337 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿರುತ್ತಾರೆ.