ಪೆÇನ್ನಂಪೇಟೆ. 18: ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಗೂರು ಗ್ರಾಮದ ಕೊಟ್ಟಂಗಡ ಕಾಳಯ್ಯ ಎಂಬವರಿಗೆ ಸೇರಿದ 2 ವರ್ಷ ಪ್ರಾಯದ ಕರುವಿನ ಮೇಲೆ ಇಂದು ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹಗಲು ಹೊತ್ತಿನಲ್ಲೇ ಹುಲಿ ದಾಳಿ ಮಾಡಿರುವುದರಿಂದ ಗ್ರಾಮಸ್ಥರು ಆತಂಕ ಗೊಂಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ, ಘಟನೆ ನಡೆದ ಸ್ಥಳದಲ್ಲಿ ಕ್ಯಾಮರಾ ಅಳವಡಿಸಿದ್ದಾರೆ.