ಸದ್ಯದಲ್ಲಿ ಆದೇಶ ಜಾರಿ

ಮಡಿಕೇರಿ, ಜೂ. 20: ರಾಜ್ಯದಲ್ಲಿ ಅವಧಿ ಪೂರ್ಣಗೊಳ್ಳುತ್ತಿರುವ ಗ್ರಾ.ಪಂ.ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸರಕಾರ ತೀರ್ಮಾನಿಸಿದೆ. ಪ್ರಸ್ತುತದ ಸನ್ನಿವೇಶದಲ್ಲಿ ಗ್ರಾ.ಪಂ. ಚುನಾವಣೆ ನಡೆಸುವುದು ಕಷ್ಟ ಸಾಧ್ಯವಾಗಿರುವುದರಿಂದ ರಾಜ್ಯ ಚುನಾವಣಾ ಆಯೋಗ ಈಗಾಗಲೇ ಚುನಾವಣೆಯನ್ನು ಮುಂದೂಡಿರುವುದಾಗಿ ಪ್ರಕಟಿಸಿದೆ.

ಕೊಡಗು ಜಿಲ್ಲೆಯಲ್ಲಿ 104 ಗ್ರಾ.ಪಂ.ಗಳಿದ್ದು, ಇದೀಗ ಹಂತ ಹಂತವಾಗಿ ವಿವಿಧ ಗ್ರಾ.ಪಂ.ಗಳ ಚುನಾಯಿತ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಳ್ಳುತ್ತಿದೆ. ಅವಧಿ ಪೂರ್ಣಗೊಳ್ಳುವ ಈ ಗ್ರಾ.ಪಂ.ಗಳಿಗೆ ಆಯಾ ಸಂದರ್ಭಕ್ಕೆ ಅನುಸಾರವಾಗಿ ಆಡಳಿತಾಧಿಕಾರಿಗಳ ನೇಮಕಕ್ಕೆ ಸಿದ್ಧತೆ ನಡೆದಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ನೀಡಿದ್ದಾರೆ.

ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ಆಡಳಿತಾಧಿಕಾರಿಗಳನ್ನಾಗಿ ಸರಕಾರದ ನಿರ್ದೇಶನದಂತೆ ನೇಮಕ ಮಾಡಲಾಗುವುದು. ಸದ್ಯದಲ್ಲಿ ಒಂದೆರಡು ದಿನಗಳಿಂದ ಆಡಳಿತಾಧಿಕಾರಿಗಳ ನೇಮಕಾತಿಯ ಕುರಿತು ಅಧಿಕೃತ ಪ್ರಕಟಣೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ‘ಶಕ್ತಿ’ಗೆ ತಿಳಿಸಿದ್ದಾರೆ.