ಕೂಡಿಗೆ, ಜೂ. 19: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಅಣೆಕಟ್ಟೆಯ ನೀರಿನ ಮಟ್ಟವನ್ನು ಕಾಯ್ದುಕೊಂಡು ಅಣೆಕಟ್ಟೆ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವುದಕ್ಕಿಂತ ಮೊದಲೇ ನದಿಗೆ ನೀರನ್ನು ಹರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಎರಡು ವರ್ಷಗಳ ಹಿಂದೆ ಹಾರಂಗಿ ಅಣೆಕಟ್ಟೆಯಿಂದ ನೀರನ್ನು ನದಿಗೆ ಹರಿಸಿದ ಪರಿಣಾಮ ನದಿದಡದ ಪ್ರದೇಶಗಳು ನೀರಿನಲ್ಲಿ ಮುಳುಗಿ ನಷ್ಟವನ್ನು ಅನುಭವಿಸಬೇಕಾಯಿತು.

ಈ ಹಿನ್ನೆಲೆಯಲ್ಲಿ ಹುದುಗೂರು ಗ್ರಾಮಸ್ಥರು ಸಭೆ ಸೇರಿ ಹಾರಂಗಿ ಅಣೆಕಟ್ಟೆಯಲ್ಲಿ ನೀರಿನ ಮಟ್ಟದ ಪರಿಮಿತಿಯನ್ನು ಕಾಯ್ದುಕೊಂಡು ಗ್ರಾಮಸ್ಥರಿಗೆ ತೊಂದರೆ ಆಗದಂತೆ ಅಣೆಕಟ್ಟೆಯಿಂದ ನೀರನ್ನು ಹರಿಸುವಂತೆ ಕಾವೇರಿ ನೀರಾವರಿ ಇಲಾಖೆಯನ್ನು ಒತ್ತಾಯಿಸಿದ್ದಾರೆ.