ಕುಶಾಲನಗರ : ಮಾಸ್ಕ್ ದಿನ ಅಂಗವಾಗಿ ಕುಶಾಲನಗರದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಪಟ್ಟಣದಲ್ಲಿ ಮೆರವಣಿಗೆ ತೆರಳಿ ಜನರಿಗೆ ಕೊರೊನಾದಿಂದ ರಕ್ಷಣೆ ಪಡೆಯುವ ಬಗ್ಗೆ ಅರಿವು ನೀಡಿದರು. ಆರೋಗ್ಯ ಕೇಂದ್ರದ ಆವರಣದಿಂದ ಆರಂಭಗೊಂಡ ಜಾಥಾ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಜಾಥಾ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ಡಿವೈಎಸ್ಪಿ ಎಚ್.ಎಂ.ಶೈಲೇಂದ್ರ ಜಾಥಾಗೆ ಚಾಲನೆ ನೀಡಿದರು. ಈ ಸಂದರ್ಭ ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ವೃತ್ತ ನಿರೀಕ್ಷಕ ಎಂ.ಮಹೇಶ್, ಕುಶಾಲನಗರ ಠಾಣಾಧಿಕಾರಿ ವೆಂಕಟರಮಣ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಧುಸೂದನ್, ಡಾ. ಪ್ರತಿಭಾ ಸೇರಿದಂತೆ ವೈದ್ಯರು, ಸಿಬ್ಬಂದಿಗಳು ಇದ್ದರು.
ಕುಶಾಲನಗರ ಪಟ್ಟಣ ಪಂಚಾಯ್ತಿ ವತಿಯಿಂದ ಮಾಸ್ಕ್ ದಿನ ಅಂಗವಾಗಿ ಅಧಿಕಾರಿಗಳು, ಜನಪ್ರತಿನಿಧಿಗಳು, ಪಪಂ ನೌಕರರು, ಸಿಬ್ಬಂದಿಗಳು ಪಟ್ಟಣದ ಮುಖ್ಯರಸ್ತೆಯಲ್ಲಿ ಮೆರವಣಿಗೆ ಮೂಲಕ ತೆರಳಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸುವ ಮೂಲಕ ತಮ್ಮನ್ನು ಹಾಗೂ ಇತರರನ್ನು ಕೊರೊನಾದಿಂದ ಸಂರಕ್ಷಣೆ ಪಡೆಯುವ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಕುಶಾಲನಗರ ಪಪಂ ಮುಖ್ಯಾಧಿಕಾರಿ ಸುಜಯ್ಕುಮಾರ್, ಸದಸ್ಯರಾದ ಡಿ.ಕೆ.ತಿಮ್ಮಪ್ಪ, ಅಮೃತ್ರಾಜ್, ಜಯಲಕ್ಷ್ಮಿ ನಂಜುಂಡಸ್ವಾಮಿ, ಸುರೇಶ್, ಆರೋಗ್ಯಾಧಿಕಾರಿ ಉದಯಕುಮಾರ್ ಮತ್ತು ಸಿಬ್ಬಂದಿಗಳು ಇದ್ದರು.
ಕೊಪ್ಪ ಗ್ರಾಮಪಂಚಾಯ್ತಿ, ಆರೋಗ್ಯ ಮತ್ತು ಕಂದಾಯ ಇಲಾಖೆ ವತಿಯಿಂದ ಮುಖ್ಯರಸ್ತೆಯಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಮೆರವಣಿಗೆ ತೆರಳಿ ಕೊರೊನಾದಿಂದ ರಕ್ಷಣೆ ಪಡೆಯುವ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಿದರು. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ರವಿಕುಮಾರ್, ಪಾಂಡು ಮತ್ತಿತರರು ಇದ್ದರು.ನಾಪೋಕ್ಲು ಇಲ್ಲಿನ ಗ್ರಾ.ಪಂ. ವತಿಯಿಂದ ಗುರುವಾರ ಮಾಸ್ಕ್ ದಿನಾಚರಣೆ ಯನ್ನು ಏರ್ಪಡಿಸಲಾಗಿತ್ತು. ನಾಪೋಕ್ಲು ವ್ಯಾಪ್ತಿಯಲ್ಲಿ ನಾಳೆಯಿಂದ ಕಡ್ಡಾಯ ವಾಗಿ ಮಾಸ್ಕ್ ಧರಿಸಬೇಕು. ತಪ್ಪಿದಲ್ಲಿ ದಂಡ ವಸೂಲು ಮಾಡಲಾಗುವುದು. ಆರೋಗ್ಯ ದೃಷ್ಟಿಯಿಂದ ಹಾಗೂ ಸುರಕ್ಷತೆಗಾಗಿ ಮಾಸ್ಕ್ ಧರಿಸುವುದು ಅನಿವಾರ್ಯವಾಗಿದ್ದು ಅಂಗಡಿಗಳಲ್ಲಿ ಕಡ್ಡಾಯವಾಗಿ ನಿಯಮ ಪಾಲಿಸಬೇಕು ಎಂದು ಗ್ರಾಮಪಂಚಾಯಿತಿ ಸಿಬ್ಬಂದಿ ಮನವಿ ಮಾಡಿದರು. ದಿನಾಚರಣೆಯ ಅಂಗವಾಗಿ ಗ್ರಾಮಪಂಚಾಯತಿ ಸಿಬ್ಬಂದಿಗಳು, ಆಶಾಕಾರ್ಯಕರ್ತೆ ಯರು ಆರೋಗ್ಯ ಕಾರ್ಯಕರ್ತೆಯರು, ಪಟ್ಟಣ ವ್ಯಾಪ್ತಿಯಲ್ಲಿ ಅಂಗಡಿಗಳಿಗೆ ತೆರಳಿ ಜಾಗೃತಿ ಮೂಡಿಸಿದರು. ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಕಡ್ಡಾಯ ಎಂಬುದನ್ನು ಮನವರಿಕೆ ಮಾಡಿಕೊಟ್ಟರು. ಗ್ರಾ.ಪಂ. ಸಿಬ್ಬಂದಿ ಷರ್ಲಿ, ಅಂಗನವಾಡಿ ಕಾರ್ಯಕರ್ತೆ ಅಜಿತ ಆಶಾಕಾರ್ಯಕರ್ತೆ ಕಾವೇರಮ್ಮ, ಪೊನ್ನಮ್ಮ, ಇನ್ನಿತರರು ಇದ್ದರು
ಸುಂಟಿಕೊಪ್ಪ: ಪ್ರತಿಯೊಬ್ಬರೂ ಮನೆಯಿಂದ ಹೊರ ಹೋಗುವ ಸಂದರ್ಭ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮುಖ್ಯ ವ್ಯಕ್ತಿಗಳೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಕೊರೊನಾದಿಂದ ರಕ್ಷಣೆ ಪಡೆದುಕೊಳ್ಳಬಹುದೆಂದು ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜೀವನ್ ಹೇಳಿದರು.
ರಾಜ್ಯ ಸರಕಾರದ ಆದೇಶದಂತೆ ಗುರುವಾರ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮಾಸ್ಕ್ ದಿನಾಚರಣೆ ಹಾಗೂ ಸಾರ್ವಜನಿಕರಿಗೆ ಅರಿವು ಕಾರ್ಯಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾಸ್ಕ್ ಧರಿಸುವುದರಿಂದ ಕೊರೊನಾ ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯವಾಗಲಿದೆ. ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಆಸ್ಪತ್ರೆ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಸಾರ್ವಜನಿಕ ಸ್ಥಳಗಳಿಗೆ ತೆರಳಿ ಕಿರಿಯ ಆರೋಗ್ಯ ಸಹಾಯಕರಾದ ಚಂದ್ರೇಶ್ ಮತ್ತು ಆಶಾ ಕಾರ್ಯಕರ್ತೆಯರ ತಂಡ ಕರಪತ್ರ ನೀಡಿ ಜನತೆಯಲ್ಲಿ ಜಾಗೃತಿ ಅರಿವು ಮೂಡಿಸಿದರು.