ಮಡಿಕೇರಿ, ಜೂ. 20: ಮುಜರಾಯಿ ಹಾಗೂ ಮೀನುಗಾರಿಕಾ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ತಾ. 23ರಂದು ಮಡಿಕೇರಿಗೆ ಆಗಮಿಸಿ ವಾಸ್ತವ್ಯ ಹೂಡಲಿರುವ ಸಚಿವರು ತಾ. 24ರಂದು ಬೆಳಿಗ್ಗೆ 9.30 ಗಂಟೆಗೆ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಬಳಿಕ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಜರಾಯಿ ಹಾಗೂ ಮೀನುಗಾರಿಕೆ ಇಲಾಖೆಗಳ ಪ್ರಗತಿಪರಿಶೀಲನಾ ಸಭೆ ಬಳಿಕ ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.