ಕುಶಾಲನಗರ, ಜೂ. 19: ಕುಶಾಲನಗರ ಯುವ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಪುನಿತ್ ನೇಮಕಗೊಂಡಿದ್ದಾರೆ. ಕುಶಾಲನಗರದ ಶೈಲಜಾ ಸಭಾಂಗಣದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ಪುನಿತ್, ಉಪಾಧ್ಯಕ್ಷ ಕೀರ್ತಿರಾಜು, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಅವರಿಗೆ ಜಿಲ್ಲಾ ಯುವ ಕಾಂಗ್ರೆಸ್ ಘಟಕ ಉಪಾಧ್ಯಕ್ಷ ಶಿವಶಂಕರ್, ಮಡಿಕೇರಿ ಕ್ಷೇತ್ರ ಅಧ್ಯಕ್ಷ ಮಿಥುನ್ ಹಾನಗಲ್ ಅಧಿಕಾರ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಿ.ಪಂ. ಸದಸ್ಯೆ ಕೆ.ಪಿ.ಚಂದ್ರಕಲಾ, ಮುಖಂಡ ವಿ.ಪಿ.ಶಶಿಧರ್ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಕರೆ ನೀಡಿದರು.
ಈ ಸಂದರ್ಭ ಕಾಂಗ್ರೆಸ್ ನಗರಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಡಾ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡುರಾವ್, ಪ್ರಮುಖರಾದ ಲೋಕೇಶ್, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಶಿವಕುಮಾರ್, ಕುಶಾಲನಗರ ಪ.ಪಂ. ಸದಸ್ಯರಾದ ಖಲೀಮುಲ್ಲಾ, ಪ್ರಮೋದ್ ಮುತ್ತಪ್ಪ, ಪುಟ್ಟಲಕ್ಷ್ಮಮ್ಮ, ಜಯಲಕ್ಷ್ಮಿ, ವಿವಿಧ ಘಟಕಗಳ ಪ್ರಮುಖರಾದ ಸುಹೇಬ್, ಫಾರೂಕ್, ಪ್ರಸನ್ನ ಮತ್ತಿತರರು ಇದ್ದರು.