ಮಡಿಕೇರಿ, ಜೂ. 20: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಹಾಕತ್ತೂರು ಗ್ರಾಮ ಪಂಚಾಯಿತಿ ತೊಂಬತ್ತು ಮನೆ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್, ತಾಲೂಕು ಪಂಚಾಯತ್ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಸದಸ್ಯೆ ಕುಮುದ ರಶ್ಮಿ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶಾರದ, ಸದಸ್ಯ ದೇವಿಪ್ರಸಾದ್, ಅಭಿವೃದ್ಧಿ ಅಧಿಕಾರಿ ದಿನೇಶ, ಹಾಕತ್ತೂರು ವಿಎಸ್ಎಸ್ಎನ್ ನಿರ್ದೇಶಕ ಪಳಂಗಪ್ಪ, ತ್ರೀನೇತ್ರ ಯುವಕ ಸಂಘದ ಅಧÀ್ಯಕ್ಷ ಪಿ.ಪಿ. ಸುಕುಮಾರ್ ಇತರರು ಇದ್ದರು.
ಜಿಲ್ಲಾ ಪಂಚಾಯಿತಿ ಹಾಗೂ ಶಾಸಕರ ಅನುದಾನ ಸೇರಿದಂತೆ 43 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಕಾಂಕ್ರಿಟಿಕರಣ, 2 ಲಕ್ಷ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಿದರು. ಲೋಕೋಪಯೋಗಿ ಸೇರಿದಂತೆ 29 ಲಕ್ಷ ರೂ. ವೆಚ್ಚದ ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿಯನ್ನು ಶಾಸಕರು ಪರಿಶೀಲಿಸಿದರು.