ಸೋಮವಾರಪೇಟೆ,ಜೂ.19: ಗಾಳಿ ಮಳೆಗೆ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದ ಘಟನೆ ಸಮೀಪದ ಯಡೂರು-ಹಾನಗಲ್ಲು ಶೆಟ್ಟಳ್ಳಿ ರಸ್ತೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಅನಾಹುತ ತಪ್ಪಿದೆ.

ಭಾರೀ ಪ್ರಮಾಣದ ಗಾಳಿಯೊಂದಿಗೆ ಮಳೆ ಸುರಿದ ಪರಿಣಾಮ ರಸ್ತೆಯ ಬದಿಯಲ್ಲಿದ್ದ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದಿದೆ. ಪರಿಣಾಮ ವಿದ್ಯುತ್ ತಂತಿಗಳು ರಸ್ತೆಯ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಜನ ಜಾನುವಾರುಗಳ ಓಡಾಟ ಇಲ್ಲದ್ದರಿಂದ ಯಾವದೇ ಅಪಾಯ ಸಂಭವಿಸಿಲ್ಲ.

ಮರಬಿದ್ದಿದ್ದರಿಂದ ಈ ಭಾಗಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ವಾಹನ ಸಂಚಾರಕ್ಕೆ ಆಡಚಣೆಯಾಯಿತು. ಈ ಬಗ್ಗೆ ಮಾಹಿತಿ ಪಡೆದ ಸೆಸ್ಕ್ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮರವನ್ನು ತೆರವುಗೊಳಿಸುವದರೊಂದಿಗೆ ವಿದ್ಯುತ್ ಸಂಪರ್ಕವನ್ನು ಸರಿಪಡಿಸಿದರು.