*ಕೊಡ್ಲಿಪೇಟೆ, ಜೂ.20: ಬ್ಯಾಡಗೊಟ್ಟ ಗ್ರಾ.ಪಂ. ವ್ಯಾಪ್ತಿಯ ಶಿರಹ ಗ್ರಾಮದಲ್ಲಿ ರೂ.11.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಂಗನವಾಡಿ ಕೇಂದ್ರವನ್ನು ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್ ಉದ್ಘಾಟಿಸಿದರು.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 8.50 ಲಕ್ಷ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 3 ಲಕ್ಷ ಅನುದಾನದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಅಂಗನವಾಡಿ ಕೇಂದ್ರವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪುಷ್ಪಾ ರಾಜೇಶ್ ತಿಳಿಸಿದರು.

ಈ ಸಂದರ್ಭ ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಜಿ.ಪಂ. ಸದಸ್ಯ ಪುಟ್ಟರಾಜು, ಬ್ಯಾಡಗೊಟ್ಟ ಗ್ರಾ.ಪಂ. ಅಧ್ಯಕ್ಷೆ ನಿರ್ಮಲ, ಉಪಾಧ್ಯಕ್ಷ ಅಹಮ್ಮದ್, ಸದಸ್ಯರುಗಳು, ಪಿಡಿಓ ಹರೀಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಣ್ಣಯ್ಯ, ಸ್ಥಳೀಯ ಪ್ರಮುಖರಾದ ಕ್ಯಾತೆ ಶಿವಕುಮಾರ್, ಪ್ರಸಾದ್ ಪಟೇಲ್, ಮಳಲಿ ನಾಗೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.