ಮಡಿಕೇರಿ, ಜೂ. 19: ತಾ.20 ರಂದು (ಇಂದು) ಬೆಳಿಗ್ಗೆ 9.30 ಗಂಟೆಗೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಹಾಕತ್ತೂರು ಗ್ರಾಮಪಂಚಾಯಿತಿ .ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್, ತಾಲೂಕು ಪಂಚಾಯತ್ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಸದಸ್ಯೆ ಕುಮುದ ರಶ್ಮಿ ಆಗಮಿಸಲಿದ್ದಾರೆ.