ಮಡಿಕೇರಿ, ಜೂ. 20: ತಾ. 20ರ ಆದೇಶದ ಮೇರೆಗೆ ಕೊಡಗು ಜಿಲ್ಲೆಗೆ ಅನ್ವಯಿಸುವಂತೆ ಕಂಟೈನ್‍ಮೆಂಟ್ ವಲಯಗಳನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸರ್ಕಾರಿ, ಪುರಸಭೆ ಉದ್ಯಾನವನಗಳನ್ನು ಮಾತ್ರ ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ ಮತ್ತು ಸಂಜೆ 5 ರಿಂದ 7 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ.
ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಂಬಂಧ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಸರ್ಕಾರಿ , ಪುರಸಭೆ ಉದ್ಯಾನವನದಲ್ಲಿ ಕಡ್ಡಾಯವಾಗಿ ಪಾಲಿಸುವ ಬಗ್ಗೆ ಸಂಬಂಧಪಟ್ಟ ನಗರಸಭೆ, ಪಟ್ಟಣ ಪಂಚಾಯಿತಿಗಳ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.