ವೀರಾಜಪೇಟೆ, ಜೂ. 20: ತಾ. 25ರಂದು ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತೆಯನ್ನು ಸಮಾಲೋಚಿಸುವ ಸಲುವಾಗಿ ತಾ:22ರಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರ ಸಮ್ಮುಖದಲ್ಲಿ ಬೆಳಿಗ್ಗೆ 9-15 ಗಂಟೆಗೆ ತಾಲೂಕು ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಯಲಿದೆ.

ತಾಲೂಕಿನ ಎಂಟು ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರುಗಳು ಸಭೆಯಲ್ಲಿ ಭಾಗವಹಿಸಲಿದ್ದು ಪರೀಕ್ಷೆಯ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಒದಗಿಸಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.