ಮಡಿಕೇರಿ, ಜೂ. 19 : ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಮಡಿಕೇರಿ ಕಚೇರಿಯು ಸುದರ್ಶನ ಸರ್ಕಲ್ ಹತ್ತಿರದ ಎಸ್.ಜಿ.ಎಸ್.ವೈ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಕಚೇರಿಯನ್ನು ನೂತನ ಕೊಡಗು ಜಿಲ್ಲಾ ಪಂಚಾಯತ್ ಕಟ್ಟಡದ 1ನೇ ಮಹಡಿಗೆ ಸ್ಥಳಾಂತರಿಸಲಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.